ಸೆಪ್ಟೆಂಬರ್ 1ರಿಂದ 17 ರ ವರೆಗೆ ಬೇರೆ ಬೇರೆ ದಿನಾಂಕವಾರು ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಅಗ್ನಿವೀರ ನೇಮಕಾತಿ ರ‍್ಯಾಲಿ ಜರುಗಲಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ವಿಭಾಗಗಳಿಂದ ರ‍್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗಾಗಿ ಸಾರಿಗೆ ಸಂಪರ್ಕ ಕಲ್ಪಿಸಲಾಗಿದೆ. ಹೆಚ್ಚುವರಿ ಸಾರಿಗೆ ಸೌಲಭ್ಯದ ಅವಶ್ಯಕತೆ ಇದ್ದಲ್ಲಿ ಸ್ಥಳೀಯ ಘಟಕ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸಹಾಯವಾಣಿ ಸಂಖ್ಯೆ 7760991867 ಸಂಪರ್ಕಿಸಬಹುದಾಗಿದ್ದು. ಸದರಿ ಸಾರಿಗೆ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳವಂತೆ ಪ್ರಕಟಣೆಯಲ್ಲಿ ತಿಳಸಿದ್ದಾರೆ.