ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2024-25ನೇ ಸಾಲಿನ ಎಸೆಸೆಲ್ಸಿ (sslc) ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಿದೆ.

ಬೆಳಿಗ್ಗೆ 11:30ಕ್ಕೆ ಫಲಿತಾಂಶಗಳು ಅಧಿಕೃತ ವೆಬ್‌ಸೈಟ್‌ಗಳಾದ https://kseab.karnataka.gov.in/ ಮತ್ತು https://karresults.nic.in/ ನಲ್ಲಿ ಲಭ್ಯವಾಗಲಿವೆ ಎಂದು ಮಂಡಳಿ ತಿಳಿಸಿದೆ.

ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದು, ಇಂದು ಅವರ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.