ಬಾಗಲಕೋಟ: ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬಿಜೆಪಿ ಸಂಘಟನಾ ಸಭೆಗೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಬಟ್ಟೆ ಪ್ರದರ್ಶನ ಮಾಡಿದ್ದಾರೆ.

ಕಾಂಗ್ರೆಸ್ ಯುವ ಘಟಕ ಹಾಗೂ ನಗರಸಭೆಯ ಕಾಂಗ್ರೆಸ್ ಕಾರ್ಯಕರ್ತರು ಕಟೀಲ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಲ್ಲದೆ, ಶೇ. 40 ಸರಕಾರ, ಅಭಿವೃದ್ಧಿ ಇಲ್ಲದ ಸರಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು, ಕಪ್ಪುಬಟ್ಟೆ ಪ್ರದರ್ಶಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ನಡೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರಿಂದ ಬಿಜೆಪಿ ಸಂಘಟನಾ ಸಭೆ ನಿರಾತಂಕವಾಗಿ ನಡೆಯಿತು.