ವಿಜಯಪುರ: ಸರಕಾರದ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿ ಆಡಳಿತ ಪಕ್ಷಕ್ಕೆ ಇರಿಸು ಮುರಿಸು ತರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಬಿಜೆಪಿ ಉಸ್ತುವಾರಿ ಅರುಣಸಿಂಗ್ ಭೇಟಿ ಕುತೂಹಲ ಮೂಡಿಸಿದೆ.
ವಿಜಯಪುರ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ಮಂಗಳವಾರ ರಾತ್ರಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.
ವಿಜಯಪುರ ಹೊರವಲಯದಲ್ಲಿರುವ ಯತ್ನಾಳ ಮಾಲೀಕತ್ವದ ಹೈಪರ್ ಮಾರ್ಟ್ನಲ್ಲಿ ಮಾತುಕತೆ ನಡೆದಿದೆ.
ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಯಿಂದ ಅಸಮಾಧಾನಗೊಂಡಿದ್ದ ಅರುಣಸಿಂಗ್, ಕೆಲ ದಿನಗಳ ಹಿಂದಷ್ಟೆ, ಯತ್ನಾಳ ನಮ್ಮ ಪಕ್ಷದ ಶಾಸಕರಷ್ಟೆ. ನಾಯಕರಲ್ಲ ಎನ್ನುವ ಹೇಳಿಕೆ ನೀಡಿದ್ದರು. ಈ ಹಿನ್ನೆಯಲ್ಲಿ ಮಂಗಳವಾರದ ಭೇಟಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.