ರಾಮನಗರ: ಬಸವಲಿಂಗ ಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನವೆಂಬರ್ 29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಎಂ. ಧನಲಕ್ಷ್ಮೀ ಅವರಿದ್ದ ಹೆಚ್ಚುವರಿ ನ್ಯಾಯಾಲಯ ಪೀಠ, ವಿಚಾರಣೆಯನ್ನು ಮುಂದೂಡಿದೆ.
ಬಂಧಿತ ಮೃತ್ಯುಂಜಯ ಸ್ವಾಮೀಜಿ ಮತ್ತು ವಕೀಲ ಮಹದೇವ್ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಮತ್ತು ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸುವಂತೆ ಕೋರ್ಟ್ ಆದೇಶ ನೀಡಿದೆ.