ವಿಜಯಪುರ: ವಿಶ್ವವಿಖ್ಯಾತ ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ವ್ಯಕ್ತಿಯೊಬ್ಬ, ಗುಮ್ಮಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜಯಪುರ ನಿವಾಸಿ 55 ವರ್ಷ ವಯಸ್ಸಿನ ಸಲೀಂ ತಿಕೋಟ್ಕರ್ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಪ್ರವಾಸಿಗರು ಆತಂಕಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.