ಬೆಂಗಳೂರು: ರಾಜ್ಯ ಸರ್ಕಾರ ಈಚೆಗಷ್ಟೇ ಪರಿಶಿಷ್ಟ ಜಾತಿಗೆ ಶೇ.17ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 7ರಷ್ಟು ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿತು.

ಈ ಮೀಸಲಾತಿ ಅನ್ವಯ ರಾಜ್ಯ ಸರ್ಕಾರದ ಅಧೀನದ ಶಾಲೆ ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳಲ್ಲಿ 2022 ನವೆಂಬರ್ 1ರಿಂದಲೇ ಅನ್ವಯವಾಗುವಂತೆ ಮೀಸಲಾತಿ ಪ್ರಮಾಣವನ್ನ ಅನುಷ್ಠಾನಗೊಳಿಸಲು ಸರ್ಕಾರ ಆದೇಶ ನೀಡಿದೆ.

ಇದೇ ನವಂಬರ್ 1ಕ್ಕಿಂತ ಮುಂಚೆ ಪ್ರವೇಶ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೆ ಈ ಆದೇಶ ಅನ್ವಯವಾಗುವುದಿಲ್ಲ. ಜೊತೆಗೆ ಸರ್ಕಾರಿ ನೇಮಕಾತಿ ಮತ್ತು ಹುದ್ದೆಗಳಲ್ಲಿನ ಮೀಸಲಾತಿ ಬಗ್ಗೆ ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಶಿವಲಿಂಗ ಪ್ರಭು ವಾಲಿ ತಿಳಿಸಿದ್ದಾರೆ.