ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷದಲ್ಲಿ ಸಂಭವಿಸಿದ್ದ ಸ್ಪೋಟ ಆಕಸ್ಮಿಕವಲ್ಲ. ಅದೊಂದು ಉಗ್ರ ಕೃತ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಸ್ಪೋಟ ಆಕಸ್ಮಿಕವಲ್ಲ ಇದೊಂದು ಉಗ್ರರ ಕೃತ್ಯ. ಹಾನಿ ನಡೆಸುವ ಉದ್ದೇಶದಿಂದಲೇ ಈ ಕೃತ್ಯ ನಡೆದಿದೆ.
ಸ್ಪೋಟದ ಕುರಿತಾಗಿ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಕರ್ನಾಟಕ ರಾಜ್ಯ ಪೊಲೀಸರು ಚರ್ಚೆ ನಡೆಸಿದ್ದಾರೆ ಎಂದು ಕ್ವಿಟ್ ನಲ್ಲಿ ಉಲ್ಲೇಖಿಸಿದ್ದಾರೆ.