ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಕಾಂತಾರಾ ಸಿನಿಮಾ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿದೆ.

ಈ ಕುರಿತು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಘೋಷಣೆ ಮಾಡಿದ್ದು, ನಾಳೆ ಅಂದರೆ ನವೆಂಬರ್ 25 ರಂದು ಪ್ರೈಮ್ ವಿಡಿಯೊದಲ್ಲಿ ಕಾಂತಾರಾ ಸಿನಿಮಾ ಬಿಡುಗಡೆ ಆಗಲಿದೆ.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ, ಸದ್ಯ 400 ಕೋಟಿ ರೂ. ಗಳಿಕೆ ಕಂಡಿದೆ.‌ ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಈಗಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ.