ವಿಜಯಪುರ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದ ಆಂತರಿಕ ಲೆಕ್ಕ ಪರಿಶೋಧಕ, ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ವ್ಯಕ್ತಿ. ಟ್ರೇಡಿಂಗ್ ಲೈಸನ್ಸ್ ನೀಡಲು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಅಲ್ಲದೇ ದಾಳಿ ಸಂದರ್ಭದಲ್ಲಿ ದೊರೆತ ಹೆಚ್ಚುವರಿ 39 ಸಾವಿರ ರೂಪಾಯಿ ಸಹ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.