ಶಿರಸಿ; ಶಿರಸಿ ಪ್ರತ್ಯೇಕ ಜಿಲ್ಲೆ ರಚನೆ ನಿರ್ಣಯ ಕೈಗೊಳ್ಳುವ ಮುಂಚೆ ಜನಪ್ರತಿನಿಧಿಗಳು ಮತ್ತು ಜನರ ಅಭಿಪ್ರಾಯ ಸಂಗ್ರಹ ಮಾಡಬೇಕು ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಜನಾಭಿಪ್ರಾಯದ ನಂತರವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆ ಅಭಿವೃದ್ದಿ ಸಾಧಿಸಿಲ್ಲ ಎನ್ನುವುದು ಸರಿಯಲ್ಲ. ಸಾಕಷ್ಟು ಅಭಿವೃದ್ಧಿ ಆಗಿದೆ. ಆದರೆ ಇನ್ನಷ್ಟು ಅಭಿವೃದ್ಧಿ ಆಗಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.