ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 550 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ. ಈ ಕುರಿತು ಸಚಿವ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ.

400 ಫಾರ್ಮಸಿ ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳನ್ನು ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲಿದ್ದಾರೆ.

ಜಿಲ್ಲಾವಾರು ಖಾಲಿ ಹುದ್ದೆಗಳ ಬಗ್ಗೆ ಅರೋಗ್ಯ ಸಚಿವ ಸುಧಾಕರ್ ವಿವರವಾದ ಅಧಿಸೂಚನೆ ಹೊರಡಿಸಿದ್ದಾರೆ.