ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಸುವರ್ಣ ಸೌಧದ ಒಳಗೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಜಟಾಪಟಿ. ಹೊರಗಡೆ ಮೀಸಲಾತಿ ಪ್ರತಿಭಟನೆ. ಪಂಚಮಸಾಲಿ ಹಾಗೂ ಮರಾಠಾ ಸಮುದಾಯ 2ಎ ಮೀಸಲಾತಿಗೆ ಪ್ರತಿಭಟನೆಗೆ ಪಟ್ಟು ಹಿಡಿದಿವೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಸರ್ಕಾರಕ್ಕೆಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಕುರಿತು ಸದಾಶಿವ ಹಾಗೂ ರಂಗರಾಜು ಆಯೋಗಗಳ ವರದಿ ಬಂದಿವೆ. ಈಗಷ್ಟೇ ಹೆಗ್ಡೆ ಅವರು, ಮಧ್ಯಂತರ ವರದಿ ಸಲ್ಲಿಸಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ವಿಚಾರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರ ವರದಿ ಕೇಳಿತ್ತು.