ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಅವರನ್ನು ವ್ಯವಸ್ಥಿತ ರೀತಿಯಲ್ಲಿ ಕೊಲೆ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ನಟನ ಸಾವಿನ ತನಿಖೆಗೆ ಈಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ.
ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ನಡೆಸಿದ ಕೂಪರ್ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಲೆ ಮಾಡಲಾಗಿದೆ ಎಂದು ಆಸ್ಪತ್ರೆ ಶವಗಾರ ಸಿಬ್ಬಂದಿ ಆರೋಪಿಸಿದ್ದಾರೆ.
ರೂಪಕುಮಾರ್ ಶಾ ಶವಗಾರ ಸಿಬ್ಬಂದಿ. ಸುಶಾಂತ್ ಶವ ಪತ್ತೆಯಾದಾಗ ಅವರ ದೇಹದ ಮೇಲೆ ಗಾಯಗಳಿದ್ದವು ಹಾಗೂ ಥಳಿಸಲಾಗಿತ್ತು ಎಂದು ರೂಪಕುಮಾರ್ ಶಾ ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆ ಸಮಯದಲ್ಲಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಅಂತ ಹೇಳಿದೆ. ಯಾರು ನನ್ನ ಕಡೆ ಗಮನಿಸಲಿಲ್ಲ. ಕೆಲಸದಲ್ಲಿ ಯಾರಿಗೂ ತೊಂದರೆ ಆಗಬಾರದೆಂದು ಇಷ್ಟು ದಿನ ಸುಮ್ಮನಿದ್ದೆ ಎಂದಿದ್ದಾರೆ.
ಈ ಸ್ಪೋಟಕ ಹೇಳಿಕೆಯಿಂದ ಕೂಪರ್ ಆಸ್ಪತ್ರೆ ಸಿಬ್ಬಂದಿ ಮೇಲೆ ಅನುಮಾನ ಸೃಷ್ಟಿಯಾಗಿದೆ. ಮರಣೋತ್ತರ ವೇಳೆ ಆಸ್ಪತ್ರೆ ಸಿಬ್ಬಂದಿ ಸತ್ಯವನ್ನು ಮುಚ್ಚಿಟ್ಟರಾ? ಎಂಬ ಅನುಮಾನಗಳು ಹುಟ್ಟಿಕೊಂಡಿವೆ.