ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರನ್ನು ಬಸ್ ಚಾಲಕ ಹಾಗೂ ನಿರ್ವಾಹಕ ಕಾಪಾಡಿದರು. ಪಂತ್ ಪ್ರಾಣ ಉಳಿಸಿದ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಹರ್ಯಾಣ ರಾಜ್ಯ ಸಾರಿಗೆ ಸಂಸ್ಥೆ ಸನ್ಮಾನಿಸಿದೆ.

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ಪಂತ್ ಕಾರಿನಿಂದ ಹೊರಬರಲು ಸಹಾಯ ಮಾಡಿದ್ದರು. ಆ ಕಾರಣಕ್ಕಾಗಿ ಹರ್ಯಾಣ ರಾಜ್ಯ ಸಾರಿಗೆ ನಿಗಮದ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ ಜೀತ್ ಅವರನ್ನು ಸನ್ಮಾನಿಸಲಾಗಿದೆ.

ಪಂತ್ ಜೀವ ಉಳಿಸಿದ ನಮ್ಮ ಸಂಸ್ಥೆಯ ಡ್ರೈವರ್ ಹಾಗೂ ಕಂಡಕ್ಟರ್‌ಗೆ ನಮ್ಮ ಕಚೇರಿಯಲ್ಲಿ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿದ್ದೇವೆ ಎಂದು ಹರಿಯಾಣ ರಾಜ್ಯ ಸಾರಿಗೆ ನಿಗಮದ ಪಾಣಿಪತ್ ಡಿಪೋದ ಜನರಲ್ ಮ್ಯಾನೇಜರ್ ಕುಲದೀಪ್ ಜಾಂಗ್ರಾ ಹೇಳಿದ್ದಾರೆ.

ಡೆಹ್ರಾಡೂನ್ ಆಸ್ಪತ್ರೆಗೆ ನಟರಾದ ಅನಿಲ್ ಕಪೂರ್ ಹಾಗೂ ಅನುಪಮ ಖೇರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.