ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆಶ್ರಮದ ಕೊಠಡಿಯಲ್ಲೇ ಬಿಎಲ್ ಡಿಈ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಶ್ರೀಗಳ ಆರೋಗ್ಯ ಏರುಪೇರು ಹಿನ್ನಲೆಯಲ್ಲಿ ಮಠಕ್ಕೆ ಭಕ್ತಾದಿಗಳ ದಂಡು ಹರಿದು ಬರುತ್ತಿದೆ. ಈಗಾಗಲೇ ಸುತ್ತೂರ ಮಠದ ದೇಶಿ ಕೇಂದ್ರ ಸ್ವಾಮೀಜಿ ಸೇರಿದಂತೆ ಹಲವರು ಆಗಮಿಸಿದ್ದಾರೆ. ಶನಿವಾರ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.