ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ.

ಹೊಸ ವರ್ಷದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನಿರ್ದೇಶಕ ಶ್ರೀನಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಈ ಪೋಸ್ಟರ್ ನಲ್ಲಿ ಶಿವಣ್ಣ ವಿಂಟೇಜ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶಿವಣ್ಣ ಗ್ಯಾಂಗ್‌ಸ್ಟರ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದನ್ನು ಮೋಷನ್‌ ಪೋಸ್ಟರ್‌ನಲ್ಲಿ ಜಗಜ್ಜಾಹೀರು ಆಗಿದೆ.

ಕನ್ನಡದಲ್ಲಿ ಸಿದ್ಧವಾಗಲಿರುವ ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಿಗೂ ಡಬ್‌ ಆಗಲಿದೆ.