ಚಿತ್ರದುರ್ಗ: ಸಚಿವ ಸ್ಥಾನ ಆಕಾಂಕ್ಷಿಗಳು ಕಡೆಗೂ ನಿಟ್ಟಸಿರು ಬಿಡುವಂತಾಗಿದೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಮಾತಾಡಿದ್ದೇನೆ. ಸಭೆ ನಡೆಸಿ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವರಾದ ಕೆ‌ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಹಾಗೂ ಸಿ‌ಪಿ ಯೋಗೇಶ್ವರ್ ಸಂಪುಟ ಸೇರಬಹುದು ಎನ್ನಲಾಗಿದೆ. ಚುನಾವಣಾ ಸಮಯದಲ್ಲಿ ಪ್ರಾದೇಶಿಕ ಹಾಗೂ ಜಾತಿವಾರು ಪ್ರಾತಿನಿಧ್ಯ ನೀಡಬಹುದು.