ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸರಕಾರ ಮೂಗಿಗೆ ತುಪ್ಪ ಹಚ್ಚಿದೆ. ಈಗ ತಲೆಗೆ ತುಪ್ಪ ಹಚ್ಚುವ ಪ್ರಯತ್ನ ಮಾಡುತ್ತಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದರು.
ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೀಸಲಾತಿ ವಿಚಾರವನ್ನು ಇದೇ ರೀತಿ ಚುನಾವಣೆ ನೀತಿ ಸಂಹಿತೆ ಜಾರಿ ಆಗುವ ವರೆಗೂ ಮುಂದೂಡುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಮೀಸಲಾತಿ ಕೊಡುವ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆರು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ಈಗ ಮತ್ತೆ ಹೋರಾಟ ಮಾಡಬೇಕಾಗಿದೆ. ನಮಗೆ ನ್ಯಾಯ ಸಿಗುವ ವರೆಗೂ ಹೋರಾಟ ನಡೆಯಲಿದೆ.
ನ್ಯಾಯ ಸಿಗದೇ ಇದ್ದರೆ 2023ರ ಚುನಾವಣೆಯಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಕಾದು ನೋಡಿ. ಯಾವ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.